alex Certify SSLC ಪರೀಕ್ಷೆ: ಒಂದು ವಾರ ಮೊದಲೇ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪರೀಕ್ಷೆ: ಒಂದು ವಾರ ಮೊದಲೇ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ

ಬೆಂಗಳೂರು: ನಿಗದಿಯಂತೆಯೇ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ಗೃಹ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಸುಗಮವಾಗಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಮಾಲೋಚನೆ ನಡೆಸಿದ್ದಾರೆ.

ಮಕ್ಕಳ ಸುರಕ್ಷತೆಗೆ ಒತ್ತು ನೀಡಲಾಗಿದೆ. ಗೃಹ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಿತ ಇಲಾಖೆಗಳ ಸಹಯೋಗದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಯಾವುದೇ ಲೋಪವಾಗದಂತೆ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುವ ಒಂದು ವಾರ ಮೊದಲು ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಗುವುದು. ಆರೋಗ್ಯ ಇಲಾಖೆ ಸಹಯೋಗದಲ್ಲಿ ಮಕ್ಕಳು ಇರುವಲ್ಲಿಯೇ ಹೋಗಿ ಆರೋಗ್ಯ ತಪಾಸಣೆ ನಡೆಸಲಾಗುವುದು. ಇದರಿಂದ ಮಕ್ಕಳಲ್ಲಿನ ಆತಂಕ ದೂರವಾಗುತ್ತದೆ. ಆತಂಕವಿಲ್ಲದೇ ಪರೀಕ್ಷೆ ಬರೆಯಲು ಅನುಲಕೂಲವಾಗಲಿದೆ  ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...