ಶಿವಮೊಗ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2020-21ನೇ ಸಾಲಿಗೆ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಸಮುದಾಯಗಳ ಅರ್ಹ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ/ನಂತರದ ಮತ್ತು ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿ ವೇತನ ಪಡೆಯಲು ಆನ್‍ಲೈನ್ ಅರ್ಜಿ ಅಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಅಂತರ್ಜಾಲ ತಾಣ https://scholarships.gov.in,ರಲ್ಲಿ ಅಕ್ಟೋಬರ್ – 31 ರೊಳಗಾಗಿ ಭರ್ತಿ ಮಾಡಿ, ಆನ್‍ಲೈನ್‍ನಲ್ಲಿ ಭರ್ತಿ ಮಾಡಿದ ಅರ್ಜಿಯ ಪ್ರತಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸಂಬಂಧಪಟ್ಟ ಕಾಲೇಜ್ ಪ್ರಾಂಶುಪಾಲರಿಗೆ ಹಾಗೂ ಆಯಾ ತಾಲೂಕು ಮಾಹಿತಿ ಕೇಂದ್ರಗಳಿಗೆ ಒಂದೊಂದು ಪ್ರತಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ, ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 2ನೇ ಮಹಡಿ, ಜಿ.ಪಂ.ಕಟ್ಟಡ, ಕುವೆಂಪು ರಸ್ತೆ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ವೆಬ್‍ಸೈಟ್ www.gokdom.kar.nic.in ಅಥವಾ ಶಿವಮೊಗ್ಗ ದೂ. ಸಂ: 08182-220206, ತಾಲೂಕು ಮಾಹಿತಿ ಕೇಂದ್ರಗಳಾದ ಭದ್ರಾವತಿ 9538853680, ತೀರ್ಥಹಳ್ಳಿ: 050479764, ಶಿಕಾರಿಪುರ ಮತ್ತು ಸಾಗರ: 7829252130, ಸೊರಬ: 9513815513 ಮತ್ತು ಹೊಸನಗರ: 9740846776 ಗಳನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.