alex Certify SSLC ಪರೀಕ್ಷೆಗೆ ಗೈರುಹಾಜರಾದವರಿಗೆ ಮತ್ತೊಂದು ಚಾನ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪರೀಕ್ಷೆಗೆ ಗೈರುಹಾಜರಾದವರಿಗೆ ಮತ್ತೊಂದು ಚಾನ್ಸ್

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದ್ದು ಯಾವುದೇ ವಿದ್ಯಾರ್ಥಿಗಳು ಗೈರುಹಾಜರಾಗಿ ಪರೀಕ್ಷೆ ಬರೆಯಲು ಸಾಧ್ಯವಾಗದಿದ್ದರೆ ಆಗಸ್ಟ್ ನಲ್ಲಿ ನಡೆಯಲಿರುವ ಪೂರಕ ಪರೀಕ್ಷೆಗೆ ಅವಕಾಶ ನೀಡಲಾಗುವುದು.

ಪೂರಕ ಪರೀಕ್ಷೆಯಲ್ಲಿ ಅವರನ್ನು ಹೊಸದಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಎಂದು ಪರಿಗಣಿಸಲಾಗುವುದು. ಕಂಟೇನ್ಮೆಂಟ್ ಜೋನ್ ವಿದ್ಯಾರ್ಥಿಗಳು ಸೇರಿದಂತೆ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಅನಾರೋಗ್ಯದಿಂದ ಯಾವುದೇ ವಿದ್ಯಾರ್ಥಿ ಪರೀಕ್ಷೆಗೆ ಗೈರುಹಾಜರಾದರೆ ಆಗಸ್ಟ್ ನಲ್ಲಿ ಪೂರಕ ಪರೀಕ್ಷೆಗೆ ಅವಕಾಶ ನೀಡಿ ಹೊಸದಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿ ಎಂದು ಪರಿಗಣಿಸಲಾಗುವುದೆಂದು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...