ನಾನು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಮಾಜಿ ಸಚಿವ ತನ್ವೀರ್ ಸೇಠ್ ಹೇಳಿರುವುದಕ್ಕೆ ಆರೋಗ್ಯ ಮತ್ತು ವೈದ್ಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ್ದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಒಬ್ಬ ಆಕಾಂಕ್ಷಿ. ಆದರೆ, ಪಕ್ಷ ಮೊದಲು ಪಕ್ಷ ಅಧಿಕಾರಕ್ಕೆ ಬರಬೇಕು. ನನ್ನ ಆಸೆ ಈಡೇರುವುದು ಮುಖ್ಯವಲ್ಲ, ಮುಖ್ಯಮಂತ್ರಿಯಾಗಲು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಂಕಿ ಸಂಖ್ಯೆ ಮುಖ್ಯವಾಗುತ್ತದೆ. ಅಗತ್ಯವಾದ ಸಂಖ್ಯಾಬಲ ಇದ್ದರೆ ನಾನೇ ಮುಖ್ಯಮಂತ್ರಿ ಆಗಬಹುದು ಎಂದು ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಸುಧಾಕರ್, ಮುಳುಗುತ್ತಿರುವ ಕಾಂಗ್ರೆಸ್ ಎಂಬ ಹಡಗಿಗೆ ನಾನೇ ನಾವಿಕ ಎಂದು ದುಂಬಾಲು ಬೀಳುತ್ತಿರುವ ನಾಯಕರನ್ನು ನೋಡಿ ಅಳಬೇಕೋ ಅಥವಾ ತಿರುಕನ ಕನಸು ಎಂದು ನಗಬೇಕೋ ಗೊತ್ತಾಗುತ್ತಿಲ್ಲ. ಲೋಕಸಭೆಯಲ್ಲಿ ಮೂರಂಕಿ ದಾಟಲಾಗದ ಪಕ್ಷದಲ್ಲಿ 30 ಸಿಎಂ ಆಕಾಂಕ್ಷಿಗಳಿದ್ದಾರೆ. ಉಪಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಪಾಠವಾಗಲಿದೆ ಎಂದು ಹೇಳಿದ್ದಾರೆ.