ಕೊರೋನಾ ಸಂಕಷ್ಟದ ವೇಳೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ ಎನ್ನುವ ಆರೋಪಗಳು ಕೇಳಿಬಂದಿವೆ. ಇದೇ ಸಂದರ್ಭದಲ್ಲಿ ಹಾವೇರಿ ಜಿಲ್ಲೆಯ 570 ಕ್ಕೂ ಹೆಚ್ಚು ಖಾಸಗಿ ವೈದ್ಯರು ಕೊರೋನಾ ಸೇವೆಗೆ ಸ್ವಯಂಪ್ರೇರಿತರಾಗಿ ಮುಂದೆ ಬಂದಿದ್ದಾರೆ.
ಅವರ ಕಾರ್ಯಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಾವೇರಿ ಜಿಲ್ಲೆಯ 570 ಖಾಸಗಿ ವೈದ್ಯರು ಸಮಾಜಮುಖಿ ನಿರ್ಧಾರದ ಮೂಲಕ ಮಾದರಿಯಾಗಿದ್ದಾರೆ. ಕೊರೋನಾದಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಯಾವುದೇ ಪ್ರತಿಫಲಾಪೇಕ್ಷೆ ಮಾಡದೆ ನಿಸ್ವಾರ್ಥ ಸೇವೆ ಸಲ್ಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ವೈದ್ಯರ ವೃತ್ತಿಪರತೆ ಮತ್ತು ಸೇವಾಮನೋಭಾವ ಶ್ಲಾಘನೀಯ ಎಂದು ಸುಧಾಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.