ಬೆಂಗಳೂರು: ನಟಿ ಸುಧಾರಾಣಿ ಅವರ ಅಣ್ಣನ ಮಗಳಿಗೆ ಅನಾರೋಗ್ಯದಿಂದ ಆಸ್ಪತ್ರೆಗೆ ಕರೆತಂದು ಮನವಿ ಮಾಡಿದರೂ ಸಕಾಲಕ್ಕೆ ಚಿಕಿತ್ಸೆ ದೊರೆತಿಲ್ಲ. ಒಂದು ಗಂಟೆಗೂ ಅಧಿಕ ಕಾಲ ಆಸ್ಪತ್ರೆಯ ಗೇಟ್ ಬಳಿಯೇ ಸುಧಾರಾಣಿ ಕಾದಿದ್ದಾರೆ.
ಆಸ್ಪತ್ರೆಯಲ್ಲಿ ಬೆಡ್, ವೆಂಟಿಲೇಟರ್ ಇಲ್ಲ ಎಂದು ಸಬೂಬು ಹೇಳಿದ ಖಾಸಗಿ ಆಸ್ಪತ್ರೆ ಸಿಬ್ಬಂದಿ ಪ್ರವೇಶವನ್ನೇ ನೀಡಿಲ್ಲ. ಕೊನೆಗೆ ಸುಧಾರಾಣಿ ಪೊಲೀಸ್ ಆಯುಕ್ತರಿಗೆ ಫೋನ್ ಮಾಡಿದ್ದು ಬಳಿಕ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ.
ಈ ಬಗ್ಗೆ ಮಾಹಿತಿ ಪಡೆದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ನಟಿ ಸುಧಾರಾಣಿ ಶೇಷಾದ್ರಿಪುರಂ ಅಪೊಲೊ ಆಸ್ಪತ್ರೆಗೆ ಬಂದಾಗ ಚಿಕಿತ್ಸೆಗೆ ತಡ ಮಾಡಲಾಗಿದೆ ಎಂಬ ಸುದ್ದಿ ನೋಡಿದೆ. ಅವರಷ್ಟೇ ಅಲ್ಲ ಸಾಮಾನ್ಯ ವ್ಯಕ್ತಿ ಯಾರೇ ಆಗಲಿ ಚಿಕಿತ್ಸೆ ಸಿಗದೇ ಪರದಾಡಬಾರದು. ಆ ಆಸ್ಪತ್ರೆ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.