ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 1498 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ರಾಜ್ಯದಲ್ಲಿ ಇವತ್ತು ಒಂದೇ ದಿನ 15 ಮಂದಿ ಮೃತಪಟ್ಟಿದ್ದು, ಇದುವರೆಗೆ ಕೊರೋನಾ ಸೋಂಕಿನಿಂದ ರಾಜ್ಯದಲ್ಲಿ 416 ಮಂದಿ ಸಾವನ್ನಪ್ಪಿದ್ದಾರೆ. 14,385 ಸಕ್ರಿಯ ಪ್ರಕರಣಗಳಿದ್ದು ಎಲ್ಲರೂ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.