alex Certify ಕೊರೋನಾ ವಾರ್ಡ್ ಶೌಚಾಲಯದಲ್ಲೇ ದುಡುಕಿನ ನಿರ್ಧಾರ ಕೈಗೊಂಡ ವ್ಯಕ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ವಾರ್ಡ್ ಶೌಚಾಲಯದಲ್ಲೇ ದುಡುಕಿನ ನಿರ್ಧಾರ ಕೈಗೊಂಡ ವ್ಯಕ್ತಿ

ಕೊರೋನಾ ಸೋಂಕಿನ ಭಯದಿಂದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ 53 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊರೋನಾ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಕೊರೋನಾ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಗಂಟಲು ದ್ರವ ಮತ್ತು ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಕೊರೊನಾ ಸೋಂಕು ತಗಲುವ ಭಯದಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...