ಬಾಗಲಕೋಟೆ: ಮೂವರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆ ಯತ್ನಿಸಿದ ಘಟನೆ ನಡೆದಿದ್ದು, ಈ ವೇಳೆ ಮೂವರು ಮಕ್ಕಳು ಮೃತಪಟ್ಟಿದ್ದು ತಾಯಿಯ ಸ್ಥಿತಿ ಚಿಂತಾಜನಕವಾಗಿದೆ.
ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಮನೆಯೊಂದರಲ್ಲಿ ಘಟನೆ ನಡೆದಿದೆ. ಮಕ್ಕಳಾದ ಶಿವಾನಿ(12), ಶಂಕರ(10), ಸುಹಾಸಿನಿ(7) ಸಾವನ್ನಪ್ಪಿದ್ದಾರೆ. ತಾಯಿ ಭಾಗೀರಥಿ ಚಿಕ್ಕಯ್ಯ ಮಠದ(32) ಸ್ಥಿತಿ ಗಂಭೀರವಾಗಿದೆ.
ತಾಯಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂಬ ಮಾಹಿತಿ ಇದೆ. ಕಳೆದ ಮೂರು ವರ್ಷಗಳ ಹಿಂದೆ ಭಾಗ್ಯಶ್ರೀ ಅವರ ಪತಿಯ ಹತ್ಯೆ ಆಗಿತ್ತು. ಮಠದ ಆಸ್ತಿ ವಿಚಾರದಲ್ಲಿ ಮೂರು ವರ್ಷದ ಹಿಂದೆ ಅವರ ಕೊಲೆಯಾಗಿತ್ತು ಎನ್ನಲಾಗಿದೆ. ಬನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.