alex Certify ರಾಘವೇಂದ್ರ ಬ್ಯಾಂಕ್ ಮಾಜಿ ಸಿಇಒ ಆತ್ಮಹತ್ಯೆ, ಬಹುಕೋಟಿ ವಂಚನೆ ಪ್ರಕರಣ ಮತ್ತಷ್ಟು ನಿಗೂಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಘವೇಂದ್ರ ಬ್ಯಾಂಕ್ ಮಾಜಿ ಸಿಇಒ ಆತ್ಮಹತ್ಯೆ, ಬಹುಕೋಟಿ ವಂಚನೆ ಪ್ರಕರಣ ಮತ್ತಷ್ಟು ನಿಗೂಢ

ಬೆಂಗಳೂರು: ಬೆಂಗಳೂರು ಬಸವನಗುಡಿಯ ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್ ಮತ್ತು ಗುರುಸಾರ್ವಭೌಮ ಕೋ ಆಪರೇಟಿವ್ ಸೊಸೈಟಿಗಳ ಬಹುಕೋಟಿ ವಂಚನೆ ಪ್ರಕರಣ ಸಿಐಡಿ ತನಿಖೆ ನಡೆದಿದೆ. ಇದರ ಬೆನ್ನಲ್ಲೇ ಬ್ಯಾಂಕಿನ ನಿವೃತ್ತ ಸಿಇಒ ವಾಸುದೇವ ಮಯ್ಯ(62) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುಬ್ರಹ್ಮಣ್ಯಪುರದ ಪೂರ್ಣಪ್ರಜ್ಞಾ ಲೇಔಟ್ ಬಳಿ ಉತ್ತರಹಳ್ಳಿ ರಸ್ತೆಯಲ್ಲಿ ತಮ್ಮ ಕಾರಿನಲ್ಲಿ ವಿಷ ಸೇವಿಸಿ ವಾಸುದೇವ ಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಗುರುತು ಪತ್ತೆಯಾಗಿದೆ.

ಮಯ್ಯ ಅವರ ಆತ್ಮಹತ್ಯೆಯಿಂದ ಬಹುಕೋಟಿ ವಂಚನೆ ಪ್ರಕರಣ ಮತ್ತಷ್ಟು ನಿಗೂಢವಾಗಿದೆ. ಬ್ಯಾಂಕಿನಲ್ಲಿ ನಕಲಿ ಖಾತೆಗಳನ್ನು ತೆರೆದು ಅವ್ಯವಹಾರ ನಡೆಸಲಾಗಿದೆ. ಹೆಚ್ಚಿನ ಬಡ್ಡಿಯ ಆಮಿಷ ನೀಡಿ ಠೇವಣಿ ಪಡೆದು ಭಾರೀ ಪ್ರಮಾಣದಲ್ಲಿ ಸಾಲ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...