alex Certify BIG NEWS: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೆ ಕೊರೋನಾ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೆ ಕೊರೋನಾ ಪಾಸಿಟಿವ್

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ವೈದ್ಯರ ಸಲಹೆಯೊಂದಿಗೆ ಅವರು ಅಗತ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಡ್ಯ ಪ್ರವಾಸದ ನಂತರದಲ್ಲಿ ಅವರಿಗೆ ಗಂಟಲು ನೋವು ಕಾಣಿಸಿಕೊಂಡಿದ್ದು, ಕೋವಿಡ್ ಪರೀಕ್ಷೆ ವೇಳೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಈ ಕುರಿತಾಗಿ ಅವರೇ ಮಾಹಿತಿ ನೀಡಿದ್ದಾರೆ.

ಆತ್ಮೀಯರೆ,

ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ. ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀನಿ.

ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇನೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿಡ್ ಲಕ್ಷಣಗಳು ಕಂಡು‌ ಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ನಿಮ್ಮ ಹಾರೈಕೆ ಇರಲಿ.

ಸುಮಲತಾ ಅಂಬರೀಷ್

ಸದಸ್ಯೆ, ಮಂಡ್ಯ ಲೋಕಸಭಾ ಕ್ಷೇತ್ರ

ಆತ್ಮೀಯರೆ, ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ…

Posted by Sumalatha Ambareesh on Monday, July 6, 2020

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...