alex Certify ಸಂಡೇ ಲಾಕ್ ಡೌನ್: ನಾಳೆ ಬೆಳಗ್ಗೆವರೆಗೆ ಬಂದ್, ಅನಗತ್ಯವಾಗಿ ಮನೆಯಿಂದ ಹೊರಗೆ ಬಂದ್ರೆ ವಾಹನ ಸೀಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಡೇ ಲಾಕ್ ಡೌನ್: ನಾಳೆ ಬೆಳಗ್ಗೆವರೆಗೆ ಬಂದ್, ಅನಗತ್ಯವಾಗಿ ಮನೆಯಿಂದ ಹೊರಗೆ ಬಂದ್ರೆ ವಾಹನ ಸೀಜ್

ಬೆಂಗಳೂರು: ಕೊರೊನಾ ಸೋಂಕು ತಡೆಗೆ ಭಾನುವಾರ ಲಾಕ್ ಡೌನ್ ಜಾರಿ ಮಾಡಿದ್ದು, ಸೋಮವಾರ ಬೆಳಗ್ಗೆವರೆಗೆ ಸಂಪೂರ್ಣ ಬಂದ್ ಆಗಲಿದೆ.

ಲಾಕ್ಡೌನ್ ಜಾರಿಯಲ್ಲಿರುವುದರಿಂದ ಅಗತ್ಯ ವಸ್ತು ಮತ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ವ್ಯಾಪಾರ ವಹಿವಾಟುಗಳು ಬಂದ್ ಆಗಲಿವೆ. ಶನಿವಾರ ರಾತ್ರಿ 9 ಗಂಟೆಯಿಂದ ಜುಲೈ 27 ರಂದು ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಲಾಕ್ಡೌನ್ ಮತ್ತು ನೈಟ್ ಕರ್ಫ್ಯೂ ಇರಲಿದೆ.

ಬಸ್, ಆಟೋ, ಟ್ಯಾಕ್ಸಿ ಸೇರಿ ಸಾರಿಗೆ ವ್ಯವಸ್ಥೆ ಸ್ಥಗಿತವಾಗಲಿದೆ. ಹಾಲು, ಆಸ್ಪತ್ರೆ, ಔಷಧಿ ಅಂಗಡಿ, ಮಾಂಸ, ಮೀನು, ತರಕಾರಿ-ದಿನಸಿ ಮೊದಲಾದ ಅಗತ್ಯ ವಸ್ತು, ಸೇವೆ ಹೊರತಾಗಿ ಉಳಿದ ಚಟುವಟಿಕೆಗಳು ಬಂದ್ ಆಗಲಿವೆ.

ಲಾಕ್ ಡೌನ್ ನಿಯಮ ಉಲ್ಲಂಘಿಸಿ ಅನಗತ್ಯವಾಗಿ ತಿರುಗಾಡುವವರಿಗೆ ಪೊಲೀಸರು ಬಿಸಿ ಮುಟ್ಟಿಸಲಿದ್ದಾರೆ. ವಾಹನ ವಶಕ್ಕೆ ಪಡೆದು ದಂಡದ ಜೊತೆಗೆ ಕೇಸ್ ದಾಖಲಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...