alex Certify ಗಮನಿಸಿ…! ಸಂಡೇ ಲಾಕ್ ಡೌನ್, ಸೋಮವಾರ ಬೆಳಗ್ಗೆವರೆಗೆ ಸಂಪೂರ್ಣ ಬಂದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಸಂಡೇ ಲಾಕ್ ಡೌನ್, ಸೋಮವಾರ ಬೆಳಗ್ಗೆವರೆಗೆ ಸಂಪೂರ್ಣ ಬಂದ್

ಬೆಂಗಳೂರು: ಕೊರೊನಾ ಸೋಂಕು ತಡೆಗೆ ಪ್ರತಿ ಭಾನುವಾರ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಅಂತೆಯೇ ಜುಲೈ 26 ರಂದು ಭಾನುವಾರ ಕಂಪ್ಲೀಟ್ ಲಾಕ್ಡೌನ್ ಜಾರಿಯಲ್ಲಿರುತ್ತದೆ.

ಶನಿವಾರ ರಾತ್ರಿಯಿಂದ ಸೋಮವಾರ ಬೆಳಗ್ಗೆವರೆಗೆ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಅಗತ್ಯ ವಸ್ತು ಮತ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ವ್ಯಾಪಾರ ವಹಿವಾಟುಗಳು ಬಂದ್ ಆಗಲಿವೆ. ಶನಿವಾರ ರಾತ್ರಿ 9 ಗಂಟೆಯಿಂದ ಜುಲೈ 27ರಂದು ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಲಾಕ್ಡೌನ್ ಮತ್ತು ನೈಟ್ ಕರ್ಫ್ಯೂ ಇರಲಿದೆ.

ಅನಗತ್ಯವಾಗಿ ತಿರುಗಾಡುವವರಿಗೆ ಪೊಲೀಸರು ಬಿಸಿ ಮುಟ್ಟಿಸಲಿದ್ದಾರೆ. ಸಾರಿಗೆ ವ್ಯವಸ್ಥೆ ಸ್ಥಗಿತವಾಗಲಿದೆ. ಹಾಲು, ಆಸ್ಪತ್ರೆ, ಔಷಧಿ ಅಂಗಡಿ, ಮಾಂಸ, ಮೀನು, ತರಕಾರಿ-ದಿನಸಿ ಮೊದಲಾದ ಅಗತ್ಯ ವಸ್ತು, ಸೇವೆ ಹೊರತಾಗಿ ಉಳಿದ ಚಟುವಟಿಕೆಗಳು ಬಂದ್ ಆಗಲಿವೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...