ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ದೇಶಾದ್ಯಂತ ಜಾರಿಗೊಳಿಸಿದ್ದ ಲಾಕ್ ಡೌನ್ ತೆರವು ಮೂರನೇ ಹಂತದ ಮಾರ್ಗಸೂಚಿಗಳನ್ನು ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಿದೆ. ಅಂತೆಯೇ ರಾಜ್ಯ ಸರ್ಕಾರ ಕೂಡ ಅನ್ಲಾಕ್ 3.0 ಮಾರ್ಗಸೂಚಿಯನ್ನು ಪ್ರಕಟಿಸಿದೆ.
ಮುಂದಿನ ಸಂಡೇ ಲಾಕ್ಡೌನ್ ಇರುವುದಿಲ್ಲ. ಆಗಸ್ಟ್ 2ರಂದು ಲಾಕ್ಡೌನ್ ತೆರವುಗೊಳಿಸಲಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಪ್ರತಿದಿನ ರಾತ್ರಿ ಕರ್ಫ್ಯೂ ಮತ್ತು ಭಾನುವಾರ ಕಂಪ್ಲೀಟ್ ಲಾಕ್ಡೌನ್ ಜಾರಿ ಮಾಡಲಾಗಿತ್ತು. ಇದನ್ನು ತೆರವುಗೊಳಿಸಲಾಗಿದೆ.
ರಾಜ್ಯ ಸರ್ಕಾರದಿಂದ ಅನ್ಲಾಕ್ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಸಂಡೆ ಲಾಕ್ಡೌನ್ ಇರುವುದಿಲ್ಲ. ನೈಟ್ ಕರ್ಫ್ಯೂ ತೆರವುಗೊಳಿಸಲಾಗಿದೆ. ಅದೇ ರೀತಿ ಶನಿವಾರದ ಸರ್ಕಾರಿ ರಜೆಯನ್ನು ರದ್ದು ಮಾಡಲಾಗಿದೆ ಎಂದು ಹೇಳಲಾಗಿದೆ.