alex Certify ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಸಂಕಷ್ಟ: ಕ್ರಿಮಿನಲ್ ವಿಚಾರಣೆ ತಡೆಗೆ ಸುಪ್ರೀಂಕೋರ್ಟ್ ನಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಸಂಕಷ್ಟ: ಕ್ರಿಮಿನಲ್ ವಿಚಾರಣೆ ತಡೆಗೆ ಸುಪ್ರೀಂಕೋರ್ಟ್ ನಕಾರ

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಆದಾಯ ತೆರಿಗೆ ಅಧಿಕಾರಿಗಳು ನಡೆಸುತ್ತಿರುವ ಕ್ರಿಮಿನಲ್ ವಿಚಾರಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ,, ನ್ಯಾಯಮೂರ್ತಿಗಳಾದ ಎಸ್.ಎಸ್. ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯನ್ ಅವರ ನ್ಯಾಯಪೀಠವು ಆದಾಯ ತೆರಿಗೆ ಇಲಾಖೆಗೆ ಈ ಪ್ರಕರಣದಲ್ಲಿ ಉತ್ತರ ಸಲ್ಲಿಸಲು ಅವಕಾಶ ನೀಡಿದೆ.

ಶಿವಕುಮಾರ್ ಪರವಾಗಿ ಹಿರಿಯ ವಕೀಲ ಮುಕುಲ್ ರೋಹಟಗಿ ಹಾಜರಾಗಿ ಕ್ರಿಮಿನಲ್ ಮೊಕದ್ದಮೆ ತಡೆಹಿಡಿಯಬೇಕು ಎಂದು ಒತ್ತಾಯಿಸಿದ್ದು ಮಧ್ಯಂತರ ತಡೆ ನೀಡದಿದ್ದರೆ ಶಿವಕುಮಾರ್ ಅವರಿಗೆ ಸರಿಪಡಿಸಲಾಗದ ಹಾನಿಯಾಗುತ್ತದೆ ಎಂದು ಹೇಳಿದ್ದಾರೆ.

ಆದಾಯ ತೆರಿಗೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಅನ್ವಯ ಐಟಿ ಇಲಾಖೆ ಡಿ.ಕೆ. ಶಿವಕುಮಾರ್ ಮತ್ತು ಇತರರ ವಿರುದ್ಧ ದೂರು ದಾಖಲಿಸಿದೆ. ಐಟಿ ಅಧಿಕಾರಿಗಳು ನಡೆಸುತ್ತಿರುವ ಕ್ರಿಮಿನಲ್ ವಿಚಾರಣೆಗೆ ತಡೆ ನೀಡಬೇಕೆಂದು ಶಿವಕುಮಾರ್ ಪರ ಹಿರಿಯ ವಕೀಲ ಮುಕುಲ್ ರೋಹಟಗಿ, ಎಸ್. ಗಣೇಶ್ ಮನವಿ ಮಾಡಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಮುಖ್ಯನ್ಯಾಯಮೂರ್ತಿಗಳಿದ್ದ ತ್ರಿಸದಸ್ಯ ಪೀಠ ವಿಚಾರಣೆಗೆ ತಡೆ ನೀಡಲು ನಿರಾಕರಿಸಿದೆ. ಶಿವಕುಮಾರ್ ಅವರ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸಲು ಐಟಿ ಇಲಾಖೆಗೆ ಎರಡು ವಾರ ಸಮಯ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...