alex Certify ಶಾಲಾ ಶುಲ್ಕ ಪಾವತಿಗೆ ಒತ್ತಡ ಹೇರುವಂತಿಲ್ಲ, ಪೋಷಕರು ಇಚ್ಚಿಸಿದ್ರೆ ಪಡೆಯಬಹುದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ಶುಲ್ಕ ಪಾವತಿಗೆ ಒತ್ತಡ ಹೇರುವಂತಿಲ್ಲ, ಪೋಷಕರು ಇಚ್ಚಿಸಿದ್ರೆ ಪಡೆಯಬಹುದು

ಲಾಕ್ ಡೌನ್ ಅವಧಿ ಮುಗಿಯುವವರೆಗೆ ಪೋಷಕರಿಂದ ಶುಲ್ಕ ವಸೂಲಿಗೆ ಮುಂದಾಗಬಾರದು ಎಂದು ಖಾಸಗಿ ಶಾಲಾ ಆಡಳಿತ ಮಂಡಳಿಗಳಿಗೆ ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ.

ಅನಿಶ್ಚಿತತೆ ಅನಿರ್ದಿಷ್ಟ ಅವಧಿಯವರೆಗೆ ಮುಂದುವರೆಯುತ್ತಿರುವುದರಿಂದ ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕರು, ಸಿಬ್ಬಂದಿಯ ವೇತನಕ್ಕೆ ಕೂಡ ತೊಂದರೆಯಾಗಿದೆ. ಮಾನವೀಯ ನೆಲೆಗಟ್ಟಿನಲ್ಲಿ ಅನುಕೂಲ ಮಾಡಿಕೊಡಲು ಹಲವು ಖಾಸಗಿ ಶಾಲಾ ಆಡಳಿತ ಮಂಡಳಿಗಳು ಸಂಘಟನೆಗಳು ಮನವಿ ಸಲ್ಲಿಸಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆಸಲಾಗಿದ್ದು ಕೆಲವು ಕ್ರಮಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಯಾವ ಪೋಷಕರು ತಮ್ಮ ಮಕ್ಕಳ ಬೋಧನಾ ಶುಲ್ಕವನ್ನು ಕಟ್ಟಲು ಆರ್ಥಿಕವಾಗಿ ಸಮರ್ಥರಿದ್ದಾರೋ? ಬಾಕಿ ಪಾವತಿಸಲು ಶಕ್ತರಿದ್ದಾರೋ ಯಾವ ಪೋಷಕರು ತಮ್ಮ ಮಕ್ಕಳ ಶಾಲೆಯ ಉಳಿವಿನ ಬಗ್ಗೆ ಆಲೋಚಿಸಿ ಪ್ರೇರಿತರಾಗಿ ಶುಲ್ಕ ಪಾವತಿಗೆ ಮುಂದಾಗುತ್ತಾರೋ ಅಂತಹ ಪೋಷಕರಿಂದ ಅವರು ಹೆಚ್ಚಿಸುವ ಸಂಖ್ಯೆಯ ಕಂತುಗಳಲ್ಲಿ ಶಿಕ್ಷಣ ಕಾಯ್ದೆಯ ಅವಕಾಶಗಳ ಅಡಿಯಲ್ಲಿ ಶುಲ್ಕ ವಸೂಲಾತಿ ಶಾಲೆಗಳಿಗೆ ಅವಕಾಶ ನೀಡಬಹುದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ತಿಳಿಸಿದ್ದಾರೆ.

ಯಾವ ಪೋಷಕರು ತಮ್ಮ ಮಕ್ಕಳ ಶುಲ್ಕವನ್ನು ಕಟ್ಟಲು ಅಸಹಾಯಕರೋ, ಸದ್ಯಕ್ಕೆ ಶುಲ್ಕ ಪಾವತಿಸಲು ಸಾಧ್ಯವಿಲ್ಲವೆಂದು ನಿರಾಕರಿಸುತ್ತಾರೋ ಅಂಥವರಿಂದ ಯಾವುದೇ ಕಾರಣಕ್ಕೂ ಶುಲ್ಕ ವಸೂಲಿ ಮಾಡುವ ಹಾಗಿಲ್ಲ. ಒಂದು ವೇಳೆ ಕಟ್ಟಲು ಸಾಧ್ಯವಾಗದ ಪೋಷಕರ ಮೇಲೆ ಒತ್ತಡ ಹೇರುವುದರ ಕುರಿತು ದೂರುಗಳು ಬಂದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಪೋಷಕರು ನೀಡುವ ಹಣವನ್ನು ಖಾಸಗಿ ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕರು, ಸಿಬ್ಬಂದಿ ವೇತನಕ್ಕೆ ಬಳಸಿಕೊಳ್ಳಲು ಪ್ರಥಮ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸಚಿವರು ಸೂಚನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...