ಚಾಮರಾಜನಗರ: ಕೊರೋನಾ ಕಾರಣದಿಂದ ಸದ್ಯಕ್ಕೆ ಶಾಲೆ ಆರಂಭವಾಗುವ ಸಾಧ್ಯತೆ ಇಲ್ಲ. ಕೊರೋನಾ ಸಂಕಷ್ಟ ಬಗೆಹರಿದಿದ್ದರೆ ಜೂನ್ 1 ರಿಂದಲೇ ಶಾಲೆಗಳು ಆರಂಭವಾಗಬೇಕಿತ್ತು. ಆದರೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಯಾವಾಗ ಶಾಲೆ ಆರಂಭವಾಗಲಿದೆ ಎನ್ನುವುದು ಖಚಿತವಾಗಿಲ್ಲ.
ಕೊರೋನಾ ಕಡಿಮೆಯಾಗುವವರೆಗೆ ಶಾಲೆ ಆರಂಭಿಸದಂತೆ ಪೋಷಕರು ಒತ್ತಾಯಿಸಿದ್ದಾರೆ. ಪೋಷಕರ ಅಭಿಪ್ರಾಯ ಪಡೆಯುತ್ತಿರುವ ಸರ್ಕಾರ ಸದ್ಯಕ್ಕೆ ಶಾಲೆ ಆರಂಭಿಸುವ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ಶಾಲೆ ಯಾವಾಗ ಆರಂಭಿಸಬೇಕು ಎಂದು ಇನ್ನೂ ನಿರ್ಧರಿಸಿಲ್ಲ ಎಂದು ತಿಳಿಸಿದ್ದಾರೆ. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿರ್ದೇಶನದಂತೆ ಶಾಲೆಗಳನ್ನು ಆರಂಭಿಸುವ ಬಗ್ಗೆ ಪೋಷಕರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಪೋಷಕರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಶಾಲೆ ಆರಂಭಿಸುವ ಬಗ್ಗೆ ಸರ್ಕಾರ ಇನ್ನೂ ನಿರ್ಧಾರ ಮಾಡಿಲ್ಲ ಎಂದು ಹೇಳಿದ್ದಾರೆ.