alex Certify ಶಾಲೆ ಆರಂಭ ಕುರಿತಾಗಿ ಮುಖ್ಯ ಮಾಹಿತಿ: ಈ ವರ್ಷ ಕಡಿತವಾಗಲಿದೆ ಶೈಕ್ಷಣಿಕ ಅವಧಿ, ಪಠ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆ ಆರಂಭ ಕುರಿತಾಗಿ ಮುಖ್ಯ ಮಾಹಿತಿ: ಈ ವರ್ಷ ಕಡಿತವಾಗಲಿದೆ ಶೈಕ್ಷಣಿಕ ಅವಧಿ, ಪಠ್ಯ

ಬೆಂಗಳೂರು: ಕೊರೋನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಿರುವುದರಿಂದ ಶೈಕ್ಷಣಿಕ ವರ್ಷ ಕಡಿತ ಮಾಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.

ಈ ವರ್ಷ ಶೈಕ್ಷಣಿಕ ಅವಧಿ ಕಡಿಮೆಯಾಗುವ ಸಾಧ್ಯತೆ ಇರುವುದರಿಂದ ಅದಕ್ಕೆ ತಕ್ಕಂತೆ ಪಠ್ಯಗಳನ್ನು ರೂಪಿಸಲು ಯೋಜಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಈ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಶೈಕ್ಷಣಿಕ ವರ್ಷ ಆರಂಭದ ಬಗ್ಗೆ ಸಮಾಲೋಚನೆ ನಡೆಸಿದ್ದು ಇರುವ ಅವಧಿಗೆ ಅನುಗುಣವಾಗಿ ಪಠ್ಯಕ್ರಮ ಸಿದ್ಧಪಡಿಸುವಂತೆ ತಿಳಿಸಿದ್ದಾರೆ.

ಒಂದರಿಂದ ಹತ್ತನೇ ತರಗತಿ ಮತ್ತು ಪಿಯುಸಿಯಲ್ಲಿ ಹೆಚ್ಚುವರಿಯಾಗಿರುವ ಪಠ್ಯವನ್ನು ಗುರುತಿಸಿ. ಮಕ್ಕಳ ಕಲಿಕೆಗೆ ಹೊರೆಯಾಗದಂತೆ ಅನಾವಶ್ಯಕ ಪುನರಾವರ್ತಿತ ಪಠ್ಯಗಳನ್ನು ಕಡಿತಗೊಳಿಸಿ ಅವಶ್ಯಕವಾದ ಪಠ್ಯ ಉಳಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕ್ರಿಯಾಯೋಜನೆ ಸಿದ್ಧಪಡಿಸಬೇಕು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...