alex Certify ಆನ್ ಲೈನ್ ಶಿಕ್ಷಣದ ಕುರಿತಾಗಿ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆನ್ ಲೈನ್ ಶಿಕ್ಷಣದ ಕುರಿತಾಗಿ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ

ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಆನ್ಲೈನ್ ಶಿಕ್ಷಣ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಕೆಜಿ-ಯುಕೆಜಿ ಮಕ್ಕಳಿಗೆ ಆನ್ಲೈನ್ ಶಿಕ್ಷಣ ನೀಡಬಾರದು. ಪೋಷಕರೊಂದಿಗೆ ವಾರಕ್ಕೆ ಎರಡು ಬಾರಿ ಶಿಕ್ಷಕರು ಚರ್ಚೆ ಚರ್ಚಿಸಬೇಕು. ಒಂದರಿಂದ ಆರು ಮತ್ತು 6 ರಿಂದ 10ನೇ ತರಗತಿವರೆಗೆ ಗೈಡ್ ಲೈನ್ ಬಂದಿದೆ. ತಜ್ಞರ ವರದಿ ನಂತರ ಎಲ್ಲ ರೂಪುರೇಷೆಗಳನ್ನು ಸಿದ್ದಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಆನ್ಲೈನ್ ಶಿಕ್ಷಣ ನೀಡುವ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಈ ವರ್ಷ ವಿಚಿತ್ರ ಮತ್ತು ವಿಶೇಷವಾದ ಶೈಕ್ಷಣಿಕ ವರ್ಷವಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಶುಲ್ಕ ಹೆಚ್ಚಳ ಮಾಡಬಾರದು. ಶುಲ್ಕ ಹೆಚ್ಚಳ ಮಾಡಿದರೆ ಸಹಾಯವಾಣಿಗೆ ದೂರು ನೀಡುವಂತೆ ಪೋಷಕರಿಗೆ ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...