ಶಾಲೆಗಳ ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಆಗಸ್ಟ್ ನಂತರ ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸಲಾಗುವುದು.
ಶಾಲೆಗಳ ಆರಂಭದ ಬಗ್ಗೆ ಪೋಷಕರ ಅಭಿಪ್ರಾಯ ಪಡೆಯಲಾಗುವುದು. ಪೋಷಕರ ನಿರ್ಧಾರದಂತೆ ಶಾಲೆ ಆರಂಭಿಸುವ ಬಗ್ಗೆ ತೀರ್ಮಾನಿಸಲಾಗುವುದು ಎನ್ನಲಾಗಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ಮಾತನಾಡಿ, ಆಗಸ್ಟ್ ನಂತರ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಹೇಳಿದ್ದಾರೆ.
ಆಗಸ್ಟ್ ನಂತರದಲ್ಲಿ ಹಂತಹಂತವಾಗಿ ಶಾಲೆಗಳನ್ನು ಆರಂಭಿಸಲಾಗುವುದು. ಮೊದಲು ಹೈಸ್ಕೂಲ್, ನಂತರ ಮಿಡ್ಲ್ ಸ್ಕೂಲ್, ಬಳಿಕ ಹೈಯರ್ ಪ್ರೈಮರಿ ಸ್ಕೂಲ್ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಯಾವುದೇ ಲಾಬಿ, ಒತ್ತಡಕ್ಕೆ ಮಣಿಯುವುದಿಲ್ಲ. ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಆದ್ಯತೆ ನೀಡಲಾಗುವುದು. ಲಾಬಿಗಳಿಗೆ ಶರಣಾಗುವ ಪ್ರಶ್ನೆಯೇ ಇಲ್ಲ.