
ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ಸುದ್ದಿ ಹರಡಿದ್ದು, ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಆಗಸ್ಟ್ 7 ರ ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗುವುದಿಲ್ಲ. ಫಲಿತಾಂಶ ಪ್ರಕಟಿಸಲು ಇನ್ನು ದಿನಾಂಕವನ್ನು ನಿಗದಿ ಮಾಡಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಆಗಸ್ಟ್ ಮೊದಲ ವಾರ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು. ನಾಳೆಯೇ ಪರೀಕ್ಷೆ ಪಲಿತಾಂಶ ಪ್ರಕಟಿಸಲಾಗುವುದು ಎನ್ನಲಾಗಿತ್ತು. ಇದಕ್ಕೆ ಸ್ಪಷ್ಟನೆ ನೀಡಿರುವ ಸಚಿವರು ಫಲಿತಾಂಶ ಪ್ರಕಟಿಸುವ ಬಗ್ಗೆ ಇನ್ನೂ ದಿನಾಂಕ ನಿಗದಿ ಮಾಡಿಲ್ಲ ಎಂದು ತಿಳಿಸಿದ್ದಾರೆ.