ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಸೆಪ್ಟಂಬರ್ ನಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಶಿಕ್ಷಕ ಮಿತ್ರ ಆಪ್ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಶಿಕ್ಷಕರಿಗೆ ಯಾವುದೇ ಸಮಸ್ಯೆಯಾಗದಂತೆ ಪಾರದರ್ಶಕ ಮತ್ತು ಶಿಕ್ಷಕ ಸ್ನೇಹಿತರ ವರ್ಗಾವಣೆ ನೀತಿ ರೂಪಿಸಲಾಗಿದೆ. ಉನ್ನತ ಶಿಕ್ಷಣ ಪರಿಷತ್ ಮಾದರಿಯಲ್ಲಿ ಶಿಕ್ಷಣ ಪರಿಷತ್ ಆರಂಭಿಸಲಾಗುವುದು. ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಅನುಕೂಲ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.