alex Certify BIG NEWS: SSLC ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರಿಂದ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: SSLC ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರಿಂದ ಸಿಹಿ ಸುದ್ದಿ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿ, ರಾಜ್ಯಾದ್ಯಂತ 220 ಮೌಲ್ಯಮಾಪನ ಕೇಂದ್ರದಲ್ಲಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನು ಎರಡು ದಿನಗಳಲ್ಲಿ 180 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಮುಗಿಯಲಿದೆ. ಬೆಂಗಳೂರು ಮಹಾನಗರದ 28 ಕೇಂದ್ರಗಳಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಮೌಲ್ಯಮಾಪನಕ್ಕೆ ಶೇ. 45 ರಷ್ಟು ಶಿಕ್ಷಕರು ಹಾಜರಾಗಿದ್ದು, ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಮೌಲ್ಯಮಾಪನ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಇನ್ನು 10 ದಿನಗಳಲ್ಲಿ ರಾಜ್ಯದ ಎಲ್ಲ ಕೇಂದ್ರಗಳ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, 8.5 ಲಕ್ಷ ವಿದ್ಯಾರ್ಥಿಗಳ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸುವ ಆಲೋಚನೆ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...