alex Certify ಬಿಗ್ ನ್ಯೂಸ್: ಕೂಡಲೇ ಜಾತಿ ಗಣತಿ ವರದಿ ಸ್ವೀಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಕೂಡಲೇ ಜಾತಿ ಗಣತಿ ವರದಿ ಸ್ವೀಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಜಾತಿ ಗಣತಿ ವರದಿ ಸ್ವೀಕರಿಸದಿದ್ದರೆ ಹೋರಾಟ ನಡೆಸುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಕೂಡಲೇ ಜಾತಿಗಣತಿ ವರದಿಯನ್ನು ಸ್ವೀಕರಿಸಬೇಕೆಂದು ಒತ್ತಾಯಿಸಿದ್ದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸರ್ಕಾರ ಕೂಡಲೇ ಸ್ವೀಕರಿಸಬೇಕು. ಇಲ್ಲದಿದ್ದರೆ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಜಾತಿಗಣತಿ ಆಧಾರದ ಮೇಲೆ ಸರ್ಕಾರದ ಸೌಲಭ್ಯ ಹಾಗೂ ಮೀಸಲಾತಿ ಕಲ್ಪಿಸಲು ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜನಗಣತಿಗೆ ಆದೇಶ ನೀಡಿದ್ದೆ. ತಮ್ಮ ಅಧಿಕಾರದ ಅವಧಿಯಲ್ಲಿ ಪೂರ್ಣ ವರದಿ ಸಿದ್ಧವಾಗಿರಲಿಲ್ಲ. ಈಗ ವರದಿ ಸಿದ್ಧವಾಗಿದ್ದು ಸರ್ಕಾರ ಅದನ್ನು ಸ್ವೀಕರಿಸಬೇಕೆಂದು ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...