ಕಲಬುರಗಿ: ನೆಲೋಗಿ ಪೊಲೀಸ್ ಠಾಣೆಯ ಪಿಎಸ್ಐ ಮಲ್ಲಣ್ಣ ಯಲಗೋಡ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆರೆ ಪೀಡಿತ ಪ್ರದೇಶದಲ್ಲಿ ಅವರು ನಾಟಕೀಯ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರು.
ಮಲ್ಲಣ್ಣ ಅವರ ಬಿಲ್ಡಪ್ ವಿಡಿಯೋಗಳು ವೈರಲ್ ಆಗಿದ್ದವು. ನೆರೆ ಪೀಡಿತ ಪ್ರದೇಶದಲ್ಲಿ ಪಿಎಸ್ಐ ಸರಿಯಾಗಿರಲಿಲ್ಲ. ಹೀಗಾಗಿ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಹೇಳಲಾಗಿದೆ.
ನೆರೆಹಾನಿಯಿಂದ ಜನ ಸಂಕಷ್ಟಕ್ಕೆ ಸಿಲುಕಿದ ಸಂದರ್ಭದಲ್ಲಿ ಪಿಎಸ್ಐ ಮಲ್ಲಣ್ಣ ನಾಟಕೀಯವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರು. ಅವರ ವರ್ತನೆ ಸರಿಯಾಗಿಲ್ಲದ ಕಾರಣ ಕಲಬುರ್ಗಿ ಪೊಲೀಸ್ ಅಧೀಕ್ಷಕರು ಸಸ್ಪೆಂಡ್ ಮಾಡಿದ್ದಾರೆ ಎನ್ನಲಾಗಿದೆ.