ಮೈಸೂರು: ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆಯಿಂದ ಲಂಚ ಪಡೆದ ಇನ್ಸ್ ಪೆಕ್ಟರ್ ಮತ್ತು ಕಾನ್ಸ್ ಟೇಬಲ್ ಅವರನ್ನು ಮೈಸೂರು ನಗರ ಪೊಲೀಸ್ ಕಮಿಷನರ್ ಅಮಾನತು ಮಾಡಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಆರೋಪಿತನಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಸಂತ್ರಸ್ತೆ ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಕಾನ್ಸ್ ಟೇಬಲ್ ಗೆ ಮನವಿ ಮಾಡಿದ್ದು ಅವರು 1 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಸಂತ್ರಸ್ತೆಯಿಂದ 1 ಲಕ್ಷ ರೂ. ಪಡೆಯುವ ವೇಳೆ ಎಸಿಬಿ ದಾಳಿ ನಡೆದು ಇಬ್ಬರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಟಗಳ್ಳಿ ಠಾಣೆಯ ಇಬ್ಬರನ್ನು ಅಮಾನತು ಮಾಡಲಾಗಿದೆ ಎಂದು ಹೇಳಲಾಗಿದೆ.