ನಮ್ಮ ಸಮುದಾಯದವರನ್ನು ಮುಖ್ಯಮಂತ್ರಿ ಮಾಡಿ ಎಂದು ಮುಂದಿನ ದಿನಗಳಲ್ಲಿ ಕೇಳುತ್ತೇವೆ ಎಂದು ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದ್ದಾರೆ.
ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಮಾತನಾಡಿ, ವಾಲ್ಮೀಕಿ ಸಮುದಾಯದವರಿಗೆ ಡಿಸಿಎಂ ಸ್ಥಾನದ ಬಗ್ಗೆ ಚರ್ಚೆ ನಡೆದಿತ್ತು. ಉಪಮುಖ್ಯಮಂತ್ರಿ ಮಾಡುವ ವಿಚಾರ ಅಧ್ಯಾಯ ಮುಗಿದಂತಾಗಿದೆ.
ಚುನಾವಣೆಯಲ್ಲಿ ನಮ್ಮ ಸಮುದಾಯ ಬಿಜೆಪಿ ಬೆಂಬಲಿಸಿದೆ. ಹೀಗಾಗಿ ನಮ್ಮ ಸಮುದಾಯದವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಮುಂದಿನ ದಿನಗಳಲ್ಲಿ ಬೇಡಿಕೆ ಇಡುತ್ತೇವೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.