alex Certify ವೇತನ ಕೇಳಿದ ಮಹಿಳೆಗೆ ತಹಶೀಲ್ದಾರ್ ಲೈಂಗಿಕ ಕಿರುಕುಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೇತನ ಕೇಳಿದ ಮಹಿಳೆಗೆ ತಹಶೀಲ್ದಾರ್ ಲೈಂಗಿಕ ಕಿರುಕುಳ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಹಶೀಲ್ದಾರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ವೇತನ ಕೇಳಿದ ಗ್ರಾಮ ಸಹಾಯಕಿಯೊಂದಿಗೆ ತಹಶೀಲ್ದಾರ್ ಅನುಚಿತವಾಗಿ ವರ್ತಿಸಿದ್ದು. ಭದ್ರಾವತಿ ಹಳೆನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ತಹಶೀಲ್ದಾರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಡಿಎಸ್ಎಸ್ ಮತ್ತು ಜೆಡಿಎಸ್ ಮುಖಂಡರು ಹಳೆನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಸಿದ್ದಾಪುರ ಗ್ರಾಮ ಲೆಕ್ಕಾಧಿಕಾರಿ ಬಳಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಮಹಿಳೆಗೆ ವೇತನ ಬಿಡುಗಡೆ ಮಾಡಲು ತಹಶೀಲ್ದಾರ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸಂತ್ರಸ್ತೆ ಹಳೆನಗರ ಠಾಣೆಗೆ ದೂರು ನೀಡಿದ್ದಾರೆ. ತಹಶೀಲ್ದಾರ್ ವಿರುದ್ಧ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...