
ಪ್ರಸ್ತುತ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರು ಕುಷ್ಟಗಿ ತಾಲೂಕು ತಹಶೀಲ್ದಾರ್ ಆಗಿದ್ದ ಸಂದರ್ಭದಲ್ಲಿ ನಡೆದ ಲವ್ವಿ ಡವ್ವಿ ನಡೆಸಿದ್ದ ವಿಡಿಯೋ ವೈರಲ್ ಆಗಿದೆ.
ಕಚೇರಿಯಲ್ಲಿ ತಹಶೀಲ್ದಾರ್ ಮಹಿಳಾ ಸಿಬ್ಬಂದಿಗೆ ಮುತ್ತಿಟ್ಟಿದ್ದಾರೆ. ತಹಶೀಲ್ದಾರ್ ಅವರ ಅಶ್ಲೀಲ ವರ್ತನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಚೇರಿಯ ಸಭಾಂಗಣದಲ್ಲಿ ಮಹಿಳಾ ಸಿಬ್ಬಂದಿಯನ್ನು ತಹಶೀಲ್ದಾರ್ ತಬ್ಬಿಕೊಂಡು ಚುಂಬಿಸಿದ್ದು, ಅವರ ವಿರುದ್ಧ ಕ್ರಮಕ್ಕೆ ಹಲವು ಸಂಘಟನೆಗಳು ಒತ್ತಾಯಿಸಿವೆ ಎನ್ನಲಾಗಿದೆ.