ಧಾರವಾಡದ ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ 8 ಮಂದಿ ಶಿಕ್ಷಕರಿಗೆ ಕೊರೊನಾ ಸೋಂಕು ತಗಲಿದೆ. ನಿನ್ನೆ ಒಂದೇ ದಿನ 7 ಮಂದಿ ಶಿಕ್ಷಕರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.
ಶಾಲೆ ಪುನರಾರಂಭದ ಪರ, ವಿರೋಧದ ಚರ್ಚೆ ನಡೆದಿರುವ ಹೊತ್ತಲ್ಲೇ ಆಘಾತಕಾರಿ ವರದಿ ಹೊರ ಬಿದ್ದಿದೆ. ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರಿಗೆ ಮೂರು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಈ ಮೂಲಕ 8 ಶಿಕ್ಷಕರಿಗೆ ಸೋಂಕು ತಗಲಿದೆ ಎಂದು ಹೇಳಲಾಗಿದೆ.
ಧಾರವಾಡದ ಪ್ರತಿಷ್ಠಿತ ಶಾಲೆ ಇದಾಗಿದ್ದು ಶಾಲೆ ಆರಂಭದ ಬಗ್ಗೆ ಜೂನ್ 6ರಂದು ಪೂರ್ವಭಾವಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಪಾಲ್ಗೊಂಡಿದ್ದ ಶಿಕ್ಷಕಿಯಿಂದ ಉಳಿದ 7 ಮಂದಿ ಶಿಕ್ಷಕರಿಗೆ ಸೋಂಕು ತಗಲಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.