ಬೆಂಗಳೂರು: ಶಿಕ್ಷಕರ ವರ್ಗಾವಣೆ ನಿಯಮ ಅಂತಿಮಗೊಳಿಸಲಾಗಿದೆ. ಶಿಕ್ಷಣ ಇಲಾಖೆ ಕರಡು ಪ್ರತಿ ನೀಡಿ ಆಕ್ಷೇಪಣೆಗೆ ಆಹ್ವಾನಿಸಲಾಗಿತ್ತು.
2500 ಆಕ್ಷೇಪಣೆ ಸಲ್ಲಿಕೆಯಾಗಿದ್ದವು. ಪರಿಶೀಲನೆ ನಂತರ ಅಂತಿಮ ನಿಯಮ ಪ್ರಕಟಿಸಲಾಗಿದೆ. ಶಿಕ್ಷಕರ ವರ್ಗಾವಣೆ ನಿಯಮ ಅಂತಿಮಗೊಂಡಿದ್ದು, ಎಲ್ಲ ಜಿಲ್ಲೆ, ತಾಲೂಕುಗಳಲ್ಲಿ ಶಿಕ್ಷಕರನ್ನು ನಿಯೋಜಿಸುವ ಉದ್ದೇಶದಿಂದ ಶೇಕಡ 25 ಕ್ಕಿಂತ ಹೆಚ್ಚು ಖಾಲಿ ಹುದ್ದೆಗಳನ್ನು ಹೊಂದಿರುವ ತಾಲೂಕಿನಲ್ಲಿ ವರ್ಗಾವಣೆಗೆ ಅವಕಾಶ ನೀಡಿಲ್ಲ.
50 ವರ್ಷ ಮೇಲ್ಪಟ್ಟ ಶಿಕ್ಷಕಿಯರು ಮತ್ತು 55 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ವರ್ಗಾವಣೆಗೆ ಅವಕಾಶ ಇರುವುದಿಲ್ಲ. ಪತಿ-ಪತ್ನಿ ಪ್ರಕರಣ, ಕೇಂದ್ರ, ರಾಜ್ಯ ಸರ್ಕಾರ ಅನುದಾನಿತ ಸಂಸ್ಥೆಯ ನೌಕರರನ್ನು ಮದುವೆಯಾದ ಶಿಕ್ಷಕರು, ಗಂಭೀರವಾದ ಕಾಯಿಲೆಯಿಂದ ಬಳಲುತ್ತಿರುವ ಶಿಕ್ಷಕ ಅಥವಾ ಪತಿ-ಪತ್ನಿ ಮಕ್ಕಳು ಮತ್ತು ಶೇಕಡ 40ಕ್ಕಿಂತ ಹೆಚ್ಚು ಅಂಗವೈಕಲ್ಯ ಹೊಂದಿರುವ ಶಿಕ್ಷಕರಿಗೆ ವಿನಾಯಿತಿ ಇದೆ.
ಅದೇ ರೀತಿ ಪರಸ್ಪರ ವರ್ಗಾವಣೆಯಲ್ಲಿ ಇದುವರೆಗೆ ಇದ್ದ ಮೂರು ವರ್ಷಗಳ ಅವಧಿಯನ್ನು ಕನಿಷ್ಠ 7 ವರ್ಷಕ್ಕೆ ಹೆಚ್ಚಿಸಲಾಗಿದೆ.