alex Certify ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಭರ್ಜರಿ ‘ಶುಭ ಸುದ್ದಿ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಭರ್ಜರಿ ‘ಶುಭ ಸುದ್ದಿ’

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ ಇಲ್ಲಿದೆ. ಶಿಕ್ಷಕರ ವರ್ಗಾವಣೆ ನಿಯಂತ್ರಣ ಕಾಯ್ದೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಜೂನ್-ಜುಲೈ ತಿಂಗಳಲ್ಲಿ ವರ್ಗಾವಣೆ ಪ್ರಕ್ರಿಯೆಯನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ. ಶಿಕ್ಷಕರ ವರ್ಗಾವಣೆ ನಿಯಮ ಸರಳೀಕರಣಗೊಳಿಸಿ ಶಿಕ್ಷಕರ ಹಿತ ಕಾಯಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಇಡಲಾಗಿದ್ದು ಇದಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಹೇಳಲಾಗಿದೆ.

ವರ್ಗಾವಣೆ ಕಾಯ್ದೆಗೆ ಸಂಪುಟದ ಅನುಮೋದನೆ ಸಿಕ್ಕಿರುವ ಹಿನ್ನೆಲೆಯಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಗೆ ಈಗಾಗಲೇ ನಿಯಮಾವಳಿಗಳನ್ನು ರೂಪಿಸಿದ್ದು ನಿಯಮಾವಳಿಗೆ ಮೇ 17ರಂದು ಅನುಮೋದನೆ ಸಿಗುವ ಸಾಧ್ಯತೆ ಇದ್ದು ಬಳಿಕ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...