ಬೆಂಗಳೂರು: ಕೊರೋನಾ ಲಾಕ್ಡೌನ್ ಕಾರಣದಿಂದಾಗಿ ರಾಜ್ಯದ ದೇವಾಲಯಗಳಲ್ಲಿ ಭಕ್ತರಿಗೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು.
ನಂತರದಲ್ಲಿ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ಇದೇ ವೇಳೆ ಕೆಲವು ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಸೆಪ್ಟೆಂಬರ್ 1 ರಿಂದ ರಾಜ್ಯದ ಎಲ್ಲಾ ದೇವಾಲಯಗಳಲ್ಲಿಯೂ ಪೂಜಾ ಕಾರ್ಯ, ಸೇವೆಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ.
ಮುಜರಾಯಿ ಇಲಾಖೆಯ ದೇವಾಲಯಗಳಲ್ಲಿ ಈ ಮೊದಲಿನಂತೆಯೇ ಎಲ್ಲಾ ಸೇವೆಗಳನ್ನು ಆರಂಭಿಸಲು ಚಿಂತನೆ ನಡೆದಿದೆ. ಕುಂಕುಮಾರ್ಚನೆ, ತುಲಾಭಾರ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ ಮೊದಲಾದ ಪೂಜಾಕಾರ್ಯ ಮತ್ತು ಸೇವೆಗಳನ್ನು ಆರಂಭಿಸಲು ಯೋಜಿಸಲಾಗಿದೆ ಎನ್ನಲಾಗಿದೆ.