
ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಭಾನುವಾರಗಳಂದು ಲಾಕ್ಡೌನ್ ಜಾರಿಯಲ್ಲಿರುವ ಕಾರಣ ದೇವಾಲಯಗಳಲ್ಲಿ ಭಕ್ತರಿಗೆ ದರ್ಶನ ನಿಷೇಧಿಸಲಾಗಿದೆ.
ಧಾರ್ಮಿಕ ದತ್ತಿ ಇಲಾಖೆ ಆಯುಕ್ತರ ಸೂಚನೆಯಂತೆ ಜುಲೈ 5 ರಿಂದ ಆಗಸ್ಟ್ 2ರವರೆಗೆ ಪ್ರತಿ ಭಾನುವಾರಗಳಂದು ಲಾಕ್ ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಭಕ್ತರಿಗೆ ದರ್ಶನ ವ್ಯವಸ್ಥೆ ಕಲ್ಪಿಸುವುದನ್ನು ನಿಷೇಧಿಸಲಾಗಿದೆ.
ಲಾಕ್ ಡೌನ್ ಸಂದರ್ಭದಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಈಗಾಗಲೇ ಹೊರಡಿಸಲಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ದೇಶನ ಹಾಗೂ ಮಾರ್ಗಸೂಚಿಗಳನ್ವಯ ಕ್ರಮಕೈಗೊಳ್ಳುವಂತೆ ತಿಳಿಸಲಾಗಿದೆ.