alex Certify ವೈದ್ಯರ ಬಂಡಾಯ: ನಾಳೆಯಿಂದ ಕೊರೋನಾ ಟೆಸ್ಟ್ ಸ್ಥಗಿತ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೈದ್ಯರ ಬಂಡಾಯ: ನಾಳೆಯಿಂದ ಕೊರೋನಾ ಟೆಸ್ಟ್ ಸ್ಥಗಿತ ಸಾಧ್ಯತೆ

ನೋಡಲ್ ಅಧಿಕಾರಿಗಳು ದಬ್ಬಾಳಿಕೆ ನಡೆಸುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನಲ್ಲಿ ನಾಳೆಯಿಂದ ಕೊರೋನಾ ಪರೀಕ್ಷೆ ನಡೆಯುವುದು ಅನುಮಾನ ಎನ್ನಲಾಗಿದೆ.

ನಂಜನಗೂಡು ತಾಲೂಕು ವೈದ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ನಂತರ ನೋಡಲ್ ಅಧಿಕಾರಿಗಳನ್ನು ಹಿಂಪಡೆಯುವಂತೆ ವೈದ್ಯಾಧಿಕಾರಿಗಳು ಒತ್ತಾಯಿಸತೊಡಗಿದ್ದಾರೆ. ನೋಡಲ್ ಅಧಿಕಾರಿಗಳು ವೈದ್ಯರ ಆತ್ಮಸ್ಥೈರ್ಯ ಕುಗ್ಗಿಸುತ್ತಿದ್ದಾರೆ. ಟಾರ್ಗೆಟ್ ನೀಡುವ ಮೂಲಕ ಒತ್ತಡ ಹೇರುತ್ತಿದ್ದಾರೆ. ಹೀಗಾಗಿ ಯಾವುದೇ ಟೆಸ್ಟ್ ಮಾಡದೆ ವೈದ್ಯರು ಸೋಮವಾರದಿಂದ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಬಿಬಿಎಂಪಿ ವೈದ್ಯಾಧಿಕಾರಿಗಳು ಕೆಲಸ ಮಾಡಲು ಸಿದ್ಧವಿದ್ದಾರೆ. ವೈಜ್ಞಾನಿಕವಾಗಿ ಪರೀಕ್ಷೆ ನಡೆಸಲು ಅವಕಾಶ ನೀಡದೇ ನೋಡಲ್ ಅಧಿಕಾರಿಗಳು ಒತ್ತಡ ಹೇರುತ್ತಿದ್ದು ಈ ಬಗ್ಗೆ ಕ್ರಮಕೈಗೊಳ್ಳಬೇಕೆಂಬ ಒತ್ತಾಯ ಕೇಳಿ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...