ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ.
ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಪರಿಷತ್ತು(NCTE) ತೀರ್ಮಾನ ಕೈಗೊಂಡಿದೆ. ಎನ್.ಸಿ.ಟಿ.ಎಂಇ. 50ನೇ ವಾರ್ಷಿಕ ಸಭೆಯಲ್ಲಿ ಈಗಾಗಲೇ ಟಿಇಟಿ ಪರೀಕ್ಷೆ ಉತ್ತೀರ್ಣರಾಗಿ ಪ್ರಮಾಣಪತ್ರ ಪಡೆದ ಅಭ್ಯರ್ಥಿಗಳಿಗೆ 7 ವರ್ಷದಿಂದ ಜೀವಿತಾವಧಿಯವರೆಗೆ ಸಿಂಧುತ್ವ ವಿಸ್ತರಿಸಲಾಗಿದೆ.
ಗುಣಮಟ್ಟದ ಶಿಕ್ಷಣ ಜಾರಿ ಉದ್ದೇಶದಿಂದ ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಪರಿಷತ್ತು 2015 ರಿಂದ ಟಿಇಟಿ ಜಾರಿಗೆ ತಂದಿದೆ. ಬಿಎಡ್ ಮತ್ತು ಡಿಎಡ್ ಪದವೀಧರರು ಶಿಕ್ಷಕರ ಹುದ್ದೆಗೆ ಆಯ್ಕೆಯಾಗಲು ಟಿಇಟಿ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಬೇಕು. ಸರ್ಕಾರಿ ಶಾಲೆ ಶಿಕ್ಷಕರ ನೇಮಕಾತಿಯಲ್ಲಿ ಟಿಇಟಿಯಲ್ಲಿ ಪಡೆದ ಶೇಕಡಾ 15 ರಷ್ಟು ಅಂಕಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ.