alex Certify ಶಾಲಾ ಮಕ್ಕಳಿಗೆ ʼಸರ್ಕಾರʼದಿಂದ ಮತ್ತೊಂದು ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ಮಕ್ಕಳಿಗೆ ʼಸರ್ಕಾರʼದಿಂದ ಮತ್ತೊಂದು ಸಿಹಿ ಸುದ್ದಿ

ಕೊರೊನಾ ಬಿಕ್ಕಟ್ಟಿನಿಂದಾಗಿ ಶಾಲೆ ಯಾವಾಗ ಆರಂಭವಾಗುತ್ತದೆ ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ. ಕೊರೋನಾದಿಂದಾಗಿ ಶಾಲೆಗಳಿಗೆ ಜುಲೈ 31 ರವರೆಗೆ ರಜೆ ನೀಡಲಾಗಿದೆ. ಶೈಕ್ಷಣಿಕ ವರ್ಷ ಆರಂಭಕ್ಕೆ ಇನ್ನು ದಿನ ನಿಗದಿಯಾಗಿಲ್ಲ. ಮಕ್ಕಳಿಗೆ ಪಠ್ಯಪುಸ್ತಕಗಳನ್ನು ಮನೆಬಾಗಿಲಿಗೆ ಪೂರೈಕೆ ಮಾಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

ಸೆಪ್ಟೆಂಬರ್ ವರೆಗೆ ಶಾಲೆಗಳ ಆರಂಭವಾಗುವ ಸಾಧ್ಯತೆ ಕಡಿಮೆ ಇರುವ ಹಿನ್ನೆಲೆಯಲ್ಲಿ ಮಕ್ಕಳು ಮನೆಯಲ್ಲಿ ಓದಿಕೊಳ್ಳಲಿ ಎನ್ನುವ ಉದ್ದೇಶದಿಂದ ಮನೆ ಬಾಗಿಲಿಗೆ ಪಠ್ಯಪುಸ್ತಕ ಪೂರೈಕೆ ಮಾಡಲಾಗುವುದು. ಖಾಸಗಿ ಶಾಲೆಗಳು ಈಗಾಗಲೇ ಹಣ ಪಾವತಿಸಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯಿಂದ ಪಠ್ಯಪುಸ್ತಕ ಪೂರೈಕೆ ಮಾಡಲಾಗುತ್ತಿದೆ. ಸರ್ಕಾರಿ ಶಾಲೆಗಳಿಗೆ ಪಠ್ಯಪುಸ್ತಕ ವಿತರಣೆ ಆರಂಭವಾಗಿಲ್ಲ.

ಪ್ರತಿ ವರ್ಷ ಜೂನ್ ವೇಳೆಗೆ ಪಠ್ಯಪುಸ್ತಕ ವಿತರಣೆ ಮಾಡಲಾಗುತ್ತದೆ. ಈ ಸಲ ವಿಳಂಬವಾಗಿ ಪಠ್ಯಪುಸ್ತಕಗಳು ಪೂರೈಕೆಯಾಗಿದ್ದು, ಇವುಗಳನ್ನು ಮಕ್ಕಳ ಮನೆಬಾಗಿಲಿಗೆ ಪೂರೈಕೆ ಮಾಡಲು ಚಿಂತನೆ ನಡೆದಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...