ಬೆಂಗಳೂರು: ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ವಿತರಣೆಗೆ ಸೂಚನೆ ನೀಡಲಾಗಿದೆ. ಪಠ್ಯ ಪುಸ್ತಕಗಳನ್ನು ಮುದ್ರಿಸಿ ಶಿಕ್ಷಣಾಧಿಕಾರಿಗಳಿಗೆ ರವಾನೆ ಮಾಡಲಾಗಿದ್ದು ಇವುಗಳನ್ನು ಮಕ್ಕಳಿಗೆ ತಲುಪಿಸಲು ನಿರ್ದೇಶನ ನೀಡಲಾಗಿದೆ.
ಕರ್ನಾಟಕ ಪಠ್ಯಪುಸ್ತಕ ಸಂಘದ ವತಿಯಿಂದ ರಾಜ್ಯದ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಪಠ್ಯ ಪುಸ್ತಕಗಳನ್ನು ವಿತರಿಸಲು ತಿಳಿಸಲಾಗಿದೆ. 2020 -21 ನೇ ಸಾಲಿಗೆ ಅಗತ್ಯವಿರುವ ಎಲ್ಲಾ ಪಠ್ಯ ಪುಸ್ತಕಗಳನ್ನು ಕರ್ನಾಟಕ ಪಠ್ಯಪುಸ್ತಕ ಸಂಘದಿಂದ ಮುದ್ರಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸಲಾಗಿದ್ದು, ಇವುಗಳನ್ನು ಪೋಷಕರ ಮೂಲಕ ಮಕ್ಕಳಿಗೆ ತಲುಪಿಸಲು ತಿಳಿಸಲಾಗಿದೆ.
ಶಾಲೆಗಳು ಆರಂಭ ಆಗದಿರುವುದರಿಂದ ಪೋಷಕರ ಮೂಲಕ ಮಕ್ಕಳಿಗೆ ಪಠ್ಯಪುಸ್ತಕ ಪೂರೈಕೆ ಮಾಡಬೇಕು. ಅಭ್ಯಾಸ ಪುಸ್ತಕ ಮತ್ತು ದಿನಚರಿಗಳನ್ನು ಶಾಲಾ ಹಂತದಲ್ಲಿ ವಿತರಿಸಲು ಶಿಕ್ಷಣಾಧಿಕಾರಿಗಳು ಕ್ರಮಕೈಗೊಳ್ಳಬೇಕೆಂದು ಹೇಳಲಾಗಿದೆ. ತರಗತಿವಾರು ವಿದ್ಯಾರ್ಥಿಗಳ ಪೋಷಕರನ್ನು ಕಡಿಮೆ ಪ್ರಮಾಣದಲ್ಲಿ ಕರೆಸಿಕೊಂಡು ಹಂತಹಂತವಾಗಿ ಪುಸ್ತಕ ವಿತರಿಸಲು ಶಾಲಾ ಮುಖ್ಯ ಶಿಕ್ಷಕರು, ಎಸ್ಡಿಎಂಸಿ ಸಮಿತಿಗೆ ತಿಳಿಸಲಾಗಿದೆ.