
ಕಳೆದ ಕೆಲ ದಿನಗಳ ಹಿಂದೆ ಕೋವಿಡ್ ಸೋಂಕಿಗೆ ಒಳಗಾಗಿದ್ದ ಮಹಿಳೆಯನ್ನ ಪಾವಗಡದ ಕ್ವಾರಂಟೈನ್ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆ ಮಹಿಳೆ ಕ್ವಾರಂಟೈನ್ ಕೇಂದ್ರದಲ್ಲೇ ಸಾವನ್ನಪ್ಪಿದ್ದರು. ಮಹಿಳೆಯ ಮೃತದೇಹವನ್ನ ತೆಗೆದುಕೊಂಡು ಹೋಗಿ ಕೊರೊನಾ ಮಾರ್ಗಸೂಚಿಯಂತೆ ಅಂತ್ಯಕ್ರಿಯೆ ಮಾಡೋದು ಬಿಟ್ಟು ಆರೋಗ್ಯ ಸಿಬ್ಬಂದಿ ಸೋಂಕಿತೆಯ ಶವವನ್ನ ಗ್ರಾಮದ ಒಳಗಿನ ಮರವೊಂದರ ಅಡಿಯಲ್ಲಿ ಇಟ್ಟು ಹೋಗಿದ್ದಾರೆ.
ಕುಟುಂಬಸ್ಥರ ಮನವಿ ಬಳಿಕವೂ ಶವದ ಅಂತ್ಯಕ್ರಿಯೆ ಮಾಡಲು ಆರೋಗ್ಯ ಸಿಬ್ಬಂದಿ ನಿರಾಕರಿಸಿದ್ದರು ಎನ್ನಲಾಗಿದೆ. ಬಳಿಕ ಮೃತ ಮಹಿಳೆಯ ಕುಟುಂಬಸ್ಥರೇ ಪಿಪಿಇ ಕಿಟ್ ಧರಿಸಿ ಅಂತ್ಯಕ್ರಿಯೆ ಮಾಡಿದ್ದಾರೆ. ಆರೋಗ್ಯ ಸಿಬ್ಬಂದಿ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗ್ತಿದೆ.