
ಬ್ಯಾಂಕ್ ಸಿಬ್ಬಂದಿಗೆ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿದ ಘಟನೆ ಅವರಗೋಳ ಗ್ರಾಮದಲ್ಲಿ ನಡೆದಿದೆ. ಶಂಕರ ಎಂಬಾತ ಮಾರಕಾಸ್ತ್ರ ತೋರಿಸಿ ಬೆದರಿಸಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಅವರಗೋಳ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಬ್ಯಾಂಕ್ ಸಿಬ್ಬಂದಿಗೆ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಲಾಗಿದೆ.
ಕೊಡಲಿ ಹಿಡಿದು ಬಂದ ಆರೋಪಿ ನೋಡಿ ಸಿಬ್ಬಂದಿ ಪರಾರಿಯಾಗಿದ್ದಾರೆ. ಸಹೋದರನ ಕೊಂದು ಜೈಲಿಗೆ ಹೋಗಿ ಬಂದಿರುವ ಶಂಕರನನ್ನು ವಶಕ್ಕೆ ಪಡೆದ ಹುಕ್ಕೇರಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.