ಬೆಂಗಳೂರು:ರಾಜ್ಯದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಯಲ್ಲಿ ಸಿಡಿಲು ಬಡಿದು ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ದುರ್ಮರಣಕ್ಕೀಡಾಗಿದ್ದಾರೆ. ಭೈರಾಪುರದ ಸಮೀಪ ಗಂಗಮ್ಮ(45), ಕವಿತಾ(32) ಮೃತಪಟ್ಟಿದ್ದಾರೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಶಾಸಕ ಎಂ.ಎಸ್. ಸೋಮಲಿಂಗಪ್ಪ ಭೇಟಿ ನೀಡಿದ್ದಾರೆ. ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಚಿಕ್ಕಉಳಿಗೇರಿ ಗ್ರಾಮದಲ್ಲಿ ಸಿಡಿಲು ಬಡಿದು ಮಹಿಳೆಯರಿಬ್ಬರು ಸಾವನ್ನಪ್ಪಿದ್ದಾರೆ. ಭಾಗವ್ವ ಹೊಸಮನಿ, ಯಲ್ಲಮ್ಮ ಮೃತಪಟ್ಟವರು ಎಂದು ಹೇಳಲಾಗಿದೆ. ಹೊಲದಲ್ಲಿ ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದು ದುರಂತ ಸಂಭವಿಸಿದೆ. ಗಾಯಗೊಂಡ ಇಬ್ಬರನ್ನು ಸವದತ್ತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸವದತ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದೆ.