alex Certify ಶಾಕಿಂಗ್: ಮರದಡಿ ನಿಂತಾಗಲೇ ಬಂದೆರಗಿದ ಬರಸಿಡಿಲು – ಸ್ಥಳದಲ್ಲೇ ಇಬ್ಬರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್: ಮರದಡಿ ನಿಂತಾಗಲೇ ಬಂದೆರಗಿದ ಬರಸಿಡಿಲು – ಸ್ಥಳದಲ್ಲೇ ಇಬ್ಬರ ಸಾವು

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಖಾನಾಪುರ ಗ್ರಾಮದ ಬಳಿ ಸಿಡಿಲು ಬಡಿದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನಾಗಪ್ಪ(38), ವೆಂಕಟೇಶ್(12) ಮೃತಪಟ್ಟವರು ಎಂದು ಹೇಳಲಾಗಿದೆ. ಸಿಡಿಲು ಬಡಿದು ಒಂದು ಕುರಿ ಮೃತಪಟ್ಟಿದೆ. ನಾಗಪ್ಪನ ಜಮೀನಿಗೆ ಕೂಲಿ ಕೆಲಸಕ್ಕೆ ಬಂದಿದ್ದ ತಾಯಿಯೊಂದಿಗೆ ಬಾಲಕ ವೆಂಕಟೇಶ್ ಕೂಡ ಆಗಮಿಸಿದ್ದ. ಭಾರಿ ಗುಡುಗು-ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಿದ್ದು ರಕ್ಷಣೆಗಾಗಿ ಮರದಡಿ ನಿಂತಿದ್ದ ವೇಳೆಯಲ್ಲಿ ಸಿಡಿಲು ಬಡಿದಿದೆ.

ಈ ವೇಳೆ ಮೂವರು ಅಪಾಯದಿಂದ ಪಾರಾಗಿದ್ದಾರೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...