alex Certify ಚಂಡಮಾರುತ: ರಾಜ್ಯದಲ್ಲಿ 4 ದಿನ ಭಾರಿ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಂಡಮಾರುತ: ರಾಜ್ಯದಲ್ಲಿ 4 ದಿನ ಭಾರಿ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿ ನಿಸರ್ಗ ಚಂಡಮಾರುತ ರೂಪುಗೊಳ್ಳುತ್ತಿದ್ದು, ಇದರಿಂದಾಗಿ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ಚಂಡಮಾರುತ ವೇಗ ಪಡೆದುಕೊಂಡು ಮುಂದಿನ 3 -4 ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎನ್ನಲಾಗಿದೆ.

ಮಹಾರಾಷ್ಟ್ರ, ಗುಜರಾತ್, ಗೋವಾ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದ್ದು, ಇದೇ ಅವಧಿಯಲ್ಲಿ ರಾಜ್ಯದಲ್ಲಿಯೂ ಮಳೆಯಾಗಲಿದೆ. ಜೂನ್ 4 ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ.

ದಕ್ಷಿಣಕನ್ನಡ, ಹಾವೇರಿ, ಶಿವಮೊಗ್ಗ, ಬಳ್ಳಾರಿ, ಕೊಡಗು, ಉತ್ತರ ಕನ್ನಡ ಮೊದಲಾದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಅದೇ ರೀತಿ ಉಡುಪಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ಕೂಡ ಭಾರಿ ಮಳೆಯಾಗಲಿದೆ. ಜೂನ್ 2 ರಂದು ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಮತ್ತೆ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಜೂನ್ 2 ರಂದು ವಾಯುಭಾರ ಕುಸಿತದಿಂದ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದ್ದು ಮೀನುಗಾರರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...