alex Certify ಪ್ರಯಾಣಿಕರಿಗೆ ಸಿಹಿ ಸುದ್ದಿ: ರಾಜ್ಯದಲ್ಲಿ ಇಂದಿನಿಂದ ವಿಶೇಷ ರೈಲು ಸಂಚಾರ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರಿಗೆ ಸಿಹಿ ಸುದ್ದಿ: ರಾಜ್ಯದಲ್ಲಿ ಇಂದಿನಿಂದ ವಿಶೇಷ ರೈಲು ಸಂಚಾರ ಆರಂಭ

ಬೆಂಗಳೂರು: ಲಾಕ್ ಡೌನ್ ಜಾರಿಯಾದಾಗಿನಿಂದ ಬಂದ್ ಆಗಿದ್ದ ರೈಲು ಸಂಚಾರ ಇಂದಿನಿಂದ ಆರಂಭವಾಗಲಿದೆ. ರಾಜ್ಯದಲ್ಲಿ ಇಂದಿನಿಂದ ಎರಡು ವಿಶೇಷ ರೈಲುಗಳ ಸಂಚಾರ ಆರಂಭವಾಗಲಿದೆ.

ಬೆಂಗಳೂರಿನಿಂದ ಬೆಳಗಾವಿ ಮತ್ತು ಬೆಂಗಳೂರಿನಿಂದ ಮೈಸೂರಿಗೆ ರೈಲು ಸಂಚಾರ ಆರಂಭಿಸಲಾಗುವುದು. ಬೆಳಗ್ಗೆ 8 ಗಂಟೆಗೆ ಬೆಂಗಳೂರಿನಿಂದ ಬೆಳಗಾವಿಗೆ ವಿಶೇಷ ರೈಲು ಸಂಚಾರ ಆರಂಭವಾಗಲಿದೆ. ಸಂಜೆ 6.30 ಕ್ಕೆ ಬೆಳಗಾವಿಯನ್ನು ತಲುಪಲಿದೆ.

ಬೆಳಗ್ಗೆ 9.20 ಕ್ಕೆ ಬೆಂಗಳೂರಿನಿಂದ ಮೈಸೂರಿಗೆ ವಿಶೇಷ ರೈಲು ಹೊರಡಲಿದ್ದು ಮಧ್ಯಾಹ್ನ 12.30 ಕ್ಕೆ ಮೈಸೂರು ತಲುಪಲಿದೆ. ಮಧ್ಯಾಹ್ನ 1.45 ಕ್ಕೆ ಮೈಸೂರಿನಿಂದ ಹೊರಟು ಸಂಜೆ 5 ಗಂಟೆಗೆ ಬೆಂಗಳೂರು ತಲುಪಲಿದೆ. ಆನ್ಲೈನ್ ಮೂಲಕ ಸೀಟು ಕಾಯ್ದಿರಿಸಬೇಕಿದೆ. ರೈಲು ನಿಲ್ದಾಣದ ಟಿಕೆಟ್ ಕೌಂಟರ್ ನಲ್ಲಿ ಟಿಕೆಟ್ ವಿತರಿಸುವುದಿಲ್ಲ.

ಜೂನ್ 1 ರಿಂದ 73 ರೈಲುಗಳ ಓಡಾಟಕ್ಕೆ ರೈಲ್ವೆ ಇಲಾಖೆ ಸಿದ್ಧತೆ ಕೈಗೊಂಡಿದೆ. ಇಂದಿನಿಂದ ರೈಲ್ವೇ ಸೇವಾ ಕೇಂದ್ರಗಳಲ್ಲಿ ರೈಲ್ವೇ ನಿಲ್ದಾಣದ ಕೌಂಟರ್ ಗಳಲ್ಲಿ ಟಿಕೆಟ್ ಬುಕಿಂಗ್ ಶುರುವಾಗಲಿದೆ. ಜೂನ್ 1 ರಿಂದ 100 ರೈಲುಗಳ ಸಂಚಾರ ಆರಂಭವಾಗಲಿದೆ. ಬೆಂಗಳೂರಿನಿಂದ ಶಿವಮೊಗ್ಗ, ಬೆಂಗಳೂರಿನಿಂದ ಹುಬ್ಬಳ್ಳಿ ಸೇರಿದಂತೆ 73 ರೈಲು ಸಂಚಾರ ಆರಂಭವಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...