alex Certify BIG NEWS: ಶಿಕ್ಷಕರ ವರ್ಗಾವಣೆ, ಟಿಇಟಿ ಪರೀಕ್ಷೆಗೆ ದಿನಾಂಕ ನಿಗದಿ – ಸಚಿವರಿಂದ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿಕ್ಷಕರ ವರ್ಗಾವಣೆ, ಟಿಇಟಿ ಪರೀಕ್ಷೆಗೆ ದಿನಾಂಕ ನಿಗದಿ – ಸಚಿವರಿಂದ ಸೂಚನೆ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷಾ  ವೇಳಾಪಟ್ಟಿ ಪ್ರಕಟಣೆಯಾದ ಕೂಡಲೇ ಟಿಇಟಿ ಪರೀಕ್ಷಾ  ದಿನಾಂಕವನ್ನು ಪ್ರಕಟಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗುರುವಾರ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ  ಈ ಕುರಿತು ಚರ್ಚಿಸಿದ ಸಚಿವರು, ಮುಂದಿನ ದಿನಗಳಲ್ಲಿ ಈ ಪರೀಕ್ಷೆಯನ್ನು ಆನ್ ಲೈನ್ ಮೂಲಕ ನಿರ್ವಹಣೆ ಮಾಡುವಲ್ಲಿ ಪೂರ್ವ ಸಿದ್ಧತಾ ಕ್ರಮಗಳನ್ನು ಪ್ರಾರಂಭಿಸಲು ಸೂಚನೆ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಕಳೆದ ವಿಧಾನಮಂಡಲದ ಅಧಿವೇಶನದಲ್ಲಿ ಅನುಮೋದನೆಗೊಂಡ ವರ್ಗಾವಣಾ ಕಾಯ್ದೆಯ ನಿಯಮಗಳನ್ನು ಶೀಘ್ರ ರೂಪಿಸಿ ವರ್ಗಾವಣಾ ವೇಳಾಪಟ್ಟಿ ಪ್ರಕಟಿಸಲು ನಿರ್ದೇಶನ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...