ಬೆಂಗಳೂರು: ರೋಗನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಚಿಕಿತ್ಸೆ ಬಳಕೆ ಮಾಡುವ ಕುರಿತಾಗಿ ರಾಜ್ಯ ಸರ್ಕಾರ ನಾಳೆ ನಿರ್ಧಾರ ಪ್ರಕಟಿಸಲಿದೆ.
ಸೋಮವಾರ ಸಂಜೆ 4 ಗಂಟೆಗೆ ಟಾಸ್ಕ್ ಪೋರ್ಸ್ ಸಭೆ ನಡೆಯಲಿದೆ. ಕೊರೋನಾ ಸೋಂಕಿತರಿಗೆ ಆಯುರ್ವೇದ ಚಿಕಿತ್ಸೆ ನೀಡಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕುರಿತು ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು.
ಅಲ್ಲದೇ, ಟಾಸ್ಕ್ ಫೋರ್ಸ್ ಸಭೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮ, ಸಿದ್ಧತೆ ಮತ್ತು ಲಾಕ್ಡೌನ್ ಜಾರಿ ಮಾಡಿದ ನಂತರದ ಪರಿಣಾಮಗಳ ಕುರಿತಾಗಿ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.