ತುಮಕೂರು ಜಿಲ್ಲೆಯಲ್ಲಿ ಚಿರತೆ ದಾಳಿಗೆ ಮತ್ತೊಬ್ಬ ಬಾಲಕ ಬಲಿಯಾಗಿದ್ದಾನೆ. ನಾರನಹಳ್ಳಿ ಗ್ರಾಮದ ಬಳಿ 12 ವರ್ಷದ ಬಾಲಕನನ್ನು ಚಿರತೆ ಕೊಂದು ಹಾಕಿದೆ.
ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ನಾರನಹಳ್ಳಿ ಸಮೀಪ ಬಾಲಕ ಹೊಲಕ್ಕೆ ಹೋಗುತ್ತಿದ್ದ ವೇಳೆಯಲ್ಲಿ ಚಿರತೆ ದಾಳಿ ನಡೆಸಿದೆ. ಶಂಕರೇಗೌಡ ಎಂಬುವರ ಪುತ್ರನಾಗಿರುವ ಉದಯ್ ವನ್ನು ಚಿರತೆ ಕೊಂದು ಹಾಕಿದೆ ಎನ್ನಲಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಪೊಲೀಸರು ದೌಡಾಯಿಸಿದ್ದಾರೆ. ಸಿಎಸ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.