alex Certify SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ‘ಗುಡ್ ನ್ಯೂಸ್’

ತುಮಕೂರು: ಸ್ಕೌಟ್ ಮತ್ತು ಗೈಡ್ಸ್ ವತಿಯಿಂದ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿರುವ ಸುಮಾರು 2.50 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾಸ್ಕ್ ವಿತರಿಸಲಾಗುವುದು ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.

ತುಮಕೂರಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಜಿಲ್ಲೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಕೌಟ್ ಮತ್ತು ಗೈಡ್ಸ್ ವತಿಯಿಂದ ನೀಡಲಾಗಿರುವ ಮಾಸ್ಕ್ ಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಹಸ್ತಾಂತರ ಮಾಡಿ ಮಾತನಾಡಿದ ಅವರು, ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಆಯುಕ್ತ ಪಿಜಿಆರ್ ಸಿಂಧ್ಯಾ ಅವರು ಸಮಯೋಚಿತವಾಗಿ ಮಾಸ್ಕ್ ನೀಡುವ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಲಿದ್ದು, ಇದರೊಂದಿಗೆ ಮತ್ತೊಂದು ಮಾಸ್ಕ್ ವಿತರಿಸಲಾಗುವುದು. ಸ್ಕೌಟ್ ಮತ್ತು ಗೈಡ್ಸ್ ಹಾಗೂ ಸರ್ಕಾರದಿಂದ ಪ್ರತಿ ವಿದ್ಯಾರ್ಥಿಗೆ ಮಾಸ್ಕ್ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...