alex Certify ಬ್ರೇಕ್ ಜಾಮ್ ಆಗಿ ಸಿಎಂ ಬೆಂಗಾವಲು ವಾಹನ ಪಲ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ರೇಕ್ ಜಾಮ್ ಆಗಿ ಸಿಎಂ ಬೆಂಗಾವಲು ವಾಹನ ಪಲ್ಟಿ

ಚಿಕ್ಕಮಗಳೂರು: ಸಿಎಂ ಬೆಂಗಾವಲು ಪಡೆ ವಾಹನ ಪಲ್ಟಿಯಾಗಿ ಇಬ್ಬರು ಸಿಬ್ಬಂದಿಗಳು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನ ಜೇನುಗದ್ದೆ ಬಳಿ ನಡೆದಿದೆ.

ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪನವರ ಕಾರ್ಯಕ್ರಮಗಳಿಗೆ ತೆರಳಿದ್ದ ಬೆಂಗಾವಲು ಪಡೆ ವಾಹನ ಮಂಗಳೂರಿನಿಂದ ವಾಪಸ್ ಆಗುತ್ತಿದ್ದ ವೇಳೆ ಚಿಕ್ಕಮಗಳೂರು ತಾಲೂಕಿನ ಜೇನುಗದ್ದೆ ಬಳಿ ಪಲ್ಟಿಯಾಗಿದೆ. ಅಪಘಾತದಲ್ಲಿ ಬೆಂಗಾವಲು ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗಳು ಗಾಯಗೊಂಡಿದ್ದಾರೆ.

ವಾಹನದ ಬ್ರೇಕ್ ಜಾಮ್ ಆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸಧ್ಯ ಗಾಯಾಳು ಸಿಬ್ಬಂದಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...