alex Certify ಶಾಕಿಂಗ್ ನ್ಯೂಸ್: ಇಂದು ಕಲಬುರ್ಗಿ 67, ಯಾದಗಿರಿ 52 ಮಂದಿಗೆ ಕೊರೋನಾ, ಉಡುಪಿಯಲ್ಲಿ 1 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: ಇಂದು ಕಲಬುರ್ಗಿ 67, ಯಾದಗಿರಿ 52 ಮಂದಿಗೆ ಕೊರೋನಾ, ಉಡುಪಿಯಲ್ಲಿ 1 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು 308 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 6824 ಕ್ಕೆ ಏರಿಕೆಯಾಗಿದೆ.

ಇವತ್ತು ಕಂಡು ಬಂದ ಹೊಸ ಪ್ರಕರಣಗಳ ಪೈಕಿ 208 ಮಂದಿ ಅಂತರರಾಜ್ಯ ಪ್ರಯಾಣಿಕರಾಗಿದ್ದು 25 ಮಂದಿ ಅಂತರರಾಷ್ಟ್ರೀಯ ಪ್ರಯಾಣಿಕರಾಗಿರುತ್ತಾರೆ.

ಕಲಬುರ್ಗಿಯಲ್ಲಿ 67, ಯಾದಗಿರಿ 52, ಬೀದರ್ 42, ಬೆಂಗಳೂರು ನಗರ 31, ದಕ್ಷಿಣಕನ್ನಡ 30, ಧಾರವಾಡ 20, ಉಡುಪಿ 14, ಹಾಸನ 11, ಬಳ್ಳಾರಿ 11, ವಿಜಯಪುರ 6, ರಾಯಚೂರು, ಉತ್ತರಕನ್ನಡ ತಲಾ 5, ಕೋಲಾರ 4, ದಾವಣಗೆರೆ 3, ಮಂಡ್ಯ, ಹಾವೇರಿ ತಲಾ 2, ಮೈಸೂರು, ಬಾಗಲಕೋಟೆ, ರಾಮನಗರ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು ತಗುಲಿದೆ.

ಉಡುಪಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1005 ಕ್ಕೆ ಏರಿಕೆಯಾಗಿದ್ದು, 584 ಮಂದಿ ಬಿಡುಗಡೆಯಾಗಿ ಒಬ್ಬರು ಮೃತಪಟ್ಟಿದ್ದಾರೆ. ಕಲಬುರ್ಗಿಯಲ್ಲಿ 883 ಒಟ್ಟು ಸೋಂಕಿತರ ಸಂಖ್ಯೆಯಲ್ಲಿ 377 ಮಂದಿ ಬಿಡುಗಡೆಯಾಗಿ 10 ಮಂದಿ ಮೃತಪಟ್ಟಿದ್ದಾರೆ. ಯಾದಗಿರಿಯಲ್ಲಿ 787 ಮಂದಿಗೆ 237 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರು ನಗರದಲ್ಲಿ 648 299 ಮಂದಿ ಬಿಡುಗಡೆಯಾಗಿ 29 ಮಂದಿ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...